Mysore
27
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯೆತೆ : ಹವಮಾನ ಇಲಾಖೆ

ಬೆಂಗಳೂರು : ಕಡು ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ.

ಇಂದಿನಿಂದ ಒಂದು ವಾರಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಒಂದು ವಾರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಇಂದು ಬೀದರ್‌, ಕಲಬುರಗಿ, ವಿಜಯಪುರ, ಧಾರವಾಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾನುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೀದರ್‌ ಜಿಲ್ಲೆಯ ಔರಾದ್‌ ಹಾಗೂ ಭಾಲ್ಕಿ ತಾಲೂಕಿನಲ್ಲಿ ಮಳೆಯಾಗಿದೆ.

Tags:
error: Content is protected !!