Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸಂವಿಧಾನದಲ್ಲಿ ರಾಜ-ರಾಣಿ ಪಟ್ಟಕ್ಕೆ ಹೆಚ್ಚು ಮಹತ್ವ ಇಲ್ಲ: ಯದುವೀರ್‌

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಗ್ಗೆ ನಿನ್ನೆ (ಮಾ.೧೮) ರಂದು ಯಾರು ರಾಜ..? ಎಂದು ಪ್ರಶ್ನಿಸಿದ್ದರು. ಈ ಕುರಿತು ಸ್ವತಃ ಪ್ರತಿಕ್ರಿಯಿಸಿರುವ ರಾಜವಂಶಸ್ಥ ಯದುವೀರ್ ಅವರು, ರಾಜ ಯಾರು ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ. ಆ ವಿಚಾರದ ಬಗ್ಗೆ ನಾನು ಹೇಗೆ ಪ್ರತಿಕ್ರಿಯೆ ಕೊಡಲಿ ಎಂದು ಯದುವೀರ್‌ ಮರು ಪ್ರಶ್ನೆ ಮಾಡಿದ್ದಾರೆ.

ನಗರದಲ್ಲಿಂದು ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಯದುವೀರ್ ಮಾತನಾಡಿದರು. ನಾನು ಈಗಾಗಲೇ ಹೇಳಿದ್ದೇನೆ, ಸಂವಿಧಾನದಲ್ಲಿ ರಾಜ-ರಾಣಿ ಎಂಬ ಯಾವುದು ವಿಶೇಷ ಮಹತ್ವ ಇಲ್ಲ. ಎಲ್ಲರೂ ಪ್ರಜೆಗಳೇ ಇಷ್ಟನ್ನು ಮಾತ್ರ ನಾನು ಹೇಳಬಲ್ಲೇ ಎಂದು ಜಾಣ್ಮೆಯ ಉತ್ತರ ನೀಡಿದ್ದಾರೆ.

ಸುತ್ತೂರು ಸ್ವಾಮೀಜಿಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಬೇರೆ ಯಾವ ವಿಚಾರಗಳ ಬಗ್ಗೆ ಚರ್ಚೆ ಮಾಡಿಲ್ಲ. ನಮ್ಮ ಚುನಾವಣಾ ಪ್ರಚಾರ ಎಂದಿನಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆ ದಿನಾಂಕ ಇನ್ನೂ ಎರಡು ಮೂರು ದಿನಗಳಲ್ಲಿ ತೀರ್ಮಾನವಾಗುತ್ತದೆ‌. ಮೋದಿ ಪ್ರಚಾರಕ್ಕೆ ಬರುವ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags: