Mysore
17
overcast clouds

Social Media

ಶುಕ್ರವಾರ, 09 ಜನವರಿ 2026
Light
Dark

IPL-2024: RCB ತಂಡ ಸೇರಿಕೊಂಡ ಕಿಂಗ್‌ ವಿರಾಟ್‌ ಕೊಹ್ಲಿ!

ಬೆಂಗಳೂರು: ಟೀಂ ಇಂಡಿಯಾ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ತರಬೇತಿ ಶಿಬಿರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.

ವಿರಾಟ್‌ ಕೊಹ್ಲಿ ಭಾನುವಾರ ಲಂಡನ್‌ನಿಂದ ಭಾರತಕ್ಕೆ ಬಂದಿಳಿದಿದ್ದರು. ಸೋಮವಾರ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ತಮ್ಮ ಎರಡನೇ ಮಗು ಅಕಾಯ್‌ ಜನನದ ಕಾರಣ ಕೊಹ್ಲಿ ಲಂಡನ್‌ನಲ್ಲಿದ್ದರು.

ಇದೇ ಮಾ.22 ರಿಂದ ಆರಂಭವಾಗಲಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 17ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ತಂಡಗಳು ಮುಖಾಮುಖಿಯಾಗಲಿದೆ.

ಮಗು ಜನನದ ಹಿನ್ನಲೆ ವಿರಾಟ್‌ ಕೊಹ್ಲಿ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್‌ ನಡುವಿನ ಐದು ಟೆಸ್ಟ್‌ ಸರಣಿಗೆ ಅಲಭ್ಯರಾಗಿದ್ದರು.

ಇದೇ ಜೂನ್‌ನಿಂದ ಅಮೇರಿಕಾ ಮತ್ತು ಕೆರೆಬಿಯನ್‌ ನಾಡಿನಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ವಿರಾಟ್‌ ಕೊಹ್ಲಿಯನ್ನು ಕೈಬಿಡುವ ಬಗ್ಗೆ ಚರ್ಚೆಗಳು ಆರಂಭವಾಗಿದ್ದು, ಈ ಕಾರಣದಿಂದಾಗಿ ಈ ಬಾರಿಯ ಐಪಿಎಲ್‌ ಪ್ರದರ್ಶನದ ಮೇಲೆ ಎಲ್ಲರ ಗಮನ ನೆಟ್ಟಿದೆ.

ಈ ಹಿಂದಿನ ಆವೃತ್ತಿಯಲ್ಲಿ ಕೊಹ್ಲಿ 2 ಶತಕ ಮತ್ತು 6 ಅರ್ಧಶತಕ ಸೇರಿದಂತೆ ಒಟ್ಟು 639 ರನ್‌ ಬಾರಿಸಿದ್ದರು.

Tags:
error: Content is protected !!