ಚೆನೈ: ಎಚ್ ಡಿ ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಸಕ್ಸಸ್ ಆಗಿದ್ದು, ಸತತ ಎರಡು ಗಂಟೆಗಳ ಕಾಲದವರೆಗೆ ನಡೆದ ಹಾರ್ಟ್ ಆಪರೇಷನ್ ಯಶಸ್ವಿಯಾಗಿದೆ.
ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಎಚ್ ಡಿ ಕುಮಾರಸ್ವಾಮಿಗೆ ಹಾರ್ಟ್ ಆಪರೇಷನ್ ನಡೆದಿದ್ದು, ಮೂರನೇ ಬಾರಿ ಹೆಚ್‍ಡಿ ಕುಮಾರಸ್ವಾಮಿ ಹೃದಯದ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.
ಅಮೆರಿಕದ ಪರಿಣಿತ ವೈದ್ಯರು ಕುಮಾರಸ್ವಾಮಿಯವರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದು, ಇದೀಗ ಶಸ್ತ್ರಚಿಕಿತ್ಸೆ ಬಳಿಕ 2-3 ದಿನ ವಿಶ್ರಾಂತಿ ಪಡೆದು, ಮಾ.25 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.





