Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಕೊಡಗು: ಪ್ರವಾಸಿಗರ ವಾಹನದ ಮೇಲೆ ಕಾಡಾನೆ ದಾಳಿ

ಮಡಿಕೇರಿ/ಸಿದ್ದಾಪುರ: ದುಬಾರೆಗೆ ತೆರಳುತ್ತಿದ್ದ ಪ್ರವಾಸಿಗರ ಕಾರಿನ ಮೇಲೆ ಕಾಡಾನೆಯೊಂದು ಹಾಡಗಲೇ ದಾಳಿ ಮಾಡಿದ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಬಳಿ ನಡೆದಿದೆ.

ಕಾರಿನಲ್ಲಿದ್ದು ಚಾಲಕ ಹಾಗೂ ಪ್ರವಾಸಿಗರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆ ದಾಳಿಯಿಂದ ಕಾರಿನ ಹಿಂಬದಿ ಜಖಂಗೊಂಡಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣವಿದೆ. ಮಡಿಕೇರಿಯಿಂದ ಚೆಟ್ಟಳ್ಳಿ ಮೂಲಕ ದುಬಾರೆಗೆ ಪ್ರವಾಸಿಗರು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ಮಾಡಿದೆ. ಈ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಏದುರಾಗಿದೆ.

ಮಡಿಕೇರಿಯಿಂದ ಚೆಟ್ಟಳ್ಳಿ ಮೂಲಕ ದುಬಾರೆಗೆ ಪ್ರವಾಸಿಗರು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ಮಾಡಿದೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: