Mysore
26
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

ಮಂಡ್ಯ ಕಣ: ಸುಮಲತಾ ವಿಚಾರದಲ್ಲಿ ಹೈಕಮಾಂಡ್‌ ನಿರ್ಧಾರವೇ ಅಂತಿಮ: ಆರ್‌. ಅಶೋಕ್‌

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌. ಅಶೋಕ್‌ ಮಾತನಾಡಿದ್ದಾರೆ.

ಸಂಸದೆ ಸುಮಲತಾ ಹಾಗೂ ವರಿಷ್ಠರ ನಡುವೆ ಯಾವ ರೀತಿ ಮಾತುಕತೆ ನಡದಿದೆಯೋ ನಮಗೆ ಗೊತ್ತಿಲ್ಲ. ಆದರೆ ಈ ವಿಚಾರದಲ್ಲಿ ಹೈಕಮಾಂಡ್‌ ನಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ.

ಮಂಡ್ಯ ಕ್ಷೇತ್ರದಿಂದ ಸುಮಲತಾ ಅವರಿಗೆ ಟಿಕೆಟ್‌ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಸಂಸದೀಯ ಮಂಡಳಿ ಕೈಗೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ. ಇದಕ್ಕಿಂತ ಮಿಗಿಲಾಗಿ ನಾನು ಏನು ಹೇಳುವುದಿಲ್ಲ. ಸುಮಲತಾ ಜೊತೆಗೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ನಾಯಕರು ಮಾತನಾಡಿದ್ದಾರೆ. ಇದರ ವಿವರ ರಾಜ್ಯ ಬಿಜೆಪಿ ನಾಯಕರಿಗೆ ಗೊತ್ತಿಲ್ಲ. ಅವರ ಮಾತೆ ಅಂತಿಮವಾಗಿರುತ್ತದೆ ಎಂದು ಅಶೋಕ್‌ ಹೇಳಿದರು.

Tags:
error: Content is protected !!