ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬವನ್ನು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಪಿಂಜರ್ ಫೋಲ್‌ನಲ್ಲಿ ವಿಶೇಷವಾಗಿ ಆಚರಿಸಲಾಯಿತು.
ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ, ಯದುವೀರ್ ಅವರ ತುಲಾಭಾರ ಮಾಡುವ ಮೂಲಕ ವಿಶಿಷ್ಟವಾಗಿ ಜನ್ಮದಿನವನ್ನು ಆಚರಿಸಲಾಯಿತು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲಾ ಭಾಗಗಳಲ್ಲಿಯೂ ಪ್ರಚಾರದ ವೇಳೆ ಉತ್ತಮ ಸ್ಪಂದನೆ ಮತ್ತು ಪ್ರತಿಕ್ರಿಯೆ ದೊರೆಯುತ್ತಿದೆ ಎಂದರು. ಬಜೆಪಿ-ಜೆಡಿಎಸ್ ಮೈತ್ರಿಗೆ ಸಂಬಂಧಿಸಿದಂತೆ ಅವರ ಭಾಗಕ್ಕೆ ಇನ್ನು ಹೋಗಿಲ್ಲ. ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಒಂದೇ ವೇದಿಕೆ ಹಂಚಿಕೊಳ್ಳಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಂಗ್ರೆಸ್ ಜಾತಿ ರಾಜಕಾರಣ ಅಸ್ತ್ರದ ಮೂಲಕ ಮತಯಾಚಿಸುತ್ತಿದ್ದಾರೆ ಎಂಬ ಪ್ರಶ್ನೆಗೆ, ನಾವು ಇಡೀ ಸಮಾಜವನ್ನು ಒಂದಾಗಿ ನೋಡುತ್ತಿದ್ದೇವೆ. ಇಡೀ ಸಮಾಜಕ್ಕಾಗಿ ಒಗ್ಗಟ್ಟಾಗಿ ನಿಂತು ಕೆಲಸ ಮಾಡುವುದರ ಮೇಲೆ ನಂಬಿಕೆಯಿಟ್ಟಿದ್ದೇವೆ. ನಾವು ಭಾರತಕ್ಕಾಗಿ ದುಡಿಯುತ್ತಿದ್ದೇವೆ ಎನ್ನುವ ದೃಷ್ಠಕೋನದಲ್ಲಿ ಕೆಲಸ ಮಾಡುತ್ತೇವೆ ಎಂದು ಯದುವೀರ್ ಪ್ರತಿಕ್ರಿಯೆ ನೀಡಿದರು.
ತುಲಾಭಾರ ಕಾರ್ಯಕ್ರಮದಲ್ಲಿ ಶಾಸಕ ಶ್ರೀವತ್ಸ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದರು.