Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಯದುವೀರ್ ಬೆಂಬಲಕ್ಕೆ ನಿಂತ ನಾಯಕ ಸಮಾಜ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪರಿವಾರ-ತಳವಾರ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದೆ. ಜೊತೆಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವ ಕಾರಣ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ಬೆಂಬಲಕ್ಕೆ ನಿಲ್ಲಲು ಬಿಜೆಪಿ ಎಸ್ಟಿ ಸಮಾವೇಶದಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು.

ನಗರದ ಲಕ್ಷ್ಮೀಪುರಂ ನೇರಂಬಳ್ಳಿ ಸಾವಿತ್ರಮ್ಮ ಕಲ್ಯಾಣಮಂಟಪದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ಎಸ್ಟಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಪಂಗಡ ಮುನ್ನಡೆ ಸಮಾವೇಶದಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ ವಸತಿ ಶಾಲೆಗಳ ಅಭಿವೃದ್ಧಿ ಮತ್ತು ಗ್ರಾಮಗಳಲ್ಲಿ ಹಿಂದುಳಿದವರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಮುದ್ರ ಯೋಜನೆ ಮುಖಾಂತರ ಹಲವರು ಪರಿಶಿಷ್ಟರು ಉದ್ಯಮಿಗಳಾಗಿದ್ದಾರೆ. ಜತೆಗೆ ಶೇ 50ಕ್ಕೂ ಹೆಚ್ಚು ಹಿಂದುಳಿದವರು ಯೋಜನೆಗಳ ಫಲಾನುಭವಿಗಳಾಗಿದ್ದಾರೆ ಎಂದು ಹೇಳಿದರು.

ಮೈಸೂರು ಅರಮನೆ ಮತ್ತು ನಾಯಕ ಸಮುದಾಯಕ್ಕೂ ಅವಿನಾಭಾವ ಸಂಬಂಧವಿದೆ. ಅರಮನೆಗೆ ಬೆಂಕಿ ಬಿದ್ದಾಗ ರಕ್ಷಸಿದ್ದು ನಾಯಕ ಸಮುದಾಯದವರೆಂದು ಗೊತ್ತಿದೆ. ಚಾಮುಂಡಿಬೆಟ್ಟದಲ್ಲಿ ತೇರು ಎಳೆಯುವವರು ನಾಯಕ ಸಮಾಜ. ಹಾಗಾಗಿ, ಈ ಸಮುದಾಯ ಇಟ್ಟಿರುವ ವಿಶ್ವಾಸವನ್ನು ಹೆಚ್ಚಿಸಲಾಗುವುದು ಎಂದರು.

Tags: