Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಬಿಜೆಪಿ 200 ಸ್ಥಾನವನ್ನೂ ಗೆಲ್ಲುವುದಿಲ್ಲ: ಡಿಕೆ ಶಿವಕುಮಾರ್‌

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನುಡಿದಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ನಾಮಪತ್ರ ಸಲ್ಲಿಕೆ ನಂತರ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲ್ಲಲಿದೆ. ಹಾಗೆಂದು ಎಎಪಿ ಪಕ್ಷ ಹಾಗೂ ಕಮ್ಯುನಿಷ್ಟ್‌ ಪಕ್ಷದವರೇ ಹೇಳುತ್ತಿದ್ದಾರೆ. ಈ ಎರಡೂ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮತಗಟ್ಟೆ ಮಟ್ಟದಲ್ಲಿ ವ್ಯಾಪಕ ಪ್ರಚಾರ ಮಾಡಬೇಕು ಎಂದರು.

ಅಮಿಶ್‌ ಶಾ ಅವರೇ ನಿಮ್ಮಲ್ಲಿರುವಷ್ಟು ಭಿನ್ನಾಭಿಪ್ರಾಯ, ಕಿತ್ತಾಟ ನಮ್ಮಲ್ಲಿಲ್ಲ. ಅಧಿಕಾರಕ್ಕಾಗಿ ಶಿವಕುಮಾರ್‌ ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೆ, ನಾನು ಮತ್ತು ಸಿದ್ದರಾಮಯ್ಯ ಒಗ್ಗಟ್ಟಾಗಿದ್ದೇವೆ. ಇಡೀ ಸಚಿವ ಸಂಪುಟ ಒಗ್ಗಟ್ಟಾಗಿದೆ. ಸರ್ಕಾರವನ್ನು ಯಶಸ್ವಿಯಗಿ ಮುನ್ನಡೆಸುತ್ತಿದ್ದೇವೆ. ಅಧಿಕಾರಕ್ಕೆ ನಾನು ಕಾದಿರುವೆ ಎಂಬುದು ನಿಮ್ಮ ಭ್ರಮೆ ಎಂದು ತಿರುಗೇಟು ನೀಡಿದರು.

Tags: