Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ದೇವರಾಜ ಮಾರುಕಟ್ಟೆಯಲ್ಲಿ ಎಂ.ಲಕ್ಷ್ಮಣ್ ಮತಾಯಾಚನೆ

ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಶಾಸಕ ಕೆ.ಹರೀಶ್ ಗೌಡ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ನಗರದ ದೇವರಾಜ ಮಾರುಕಟ್ಟೆಯಲ್ಲಿ ಶುಕ್ರವಾರ ಬೆಳಿಗ್ಗೆ ಮತಾಯಾಚನೆ ಮಾಡಿದರು.

ಮಾರುಕಟ್ಟೆಯ ಪ್ರತಿ ಮಳಿಗೆಗಳಿಗೂ ಭೇಟಿ ನೀಡಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯ ತಿಳಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ವಿನಂತಿ ಮಾಡಿಕೊಂಡರು.

ದೇವರಾಜ ವಾರುಕಟ್ಟೆಯ ವರ್ತಕರ ಸಂಘದ ಅಧ್ಯಕ್ಷ ಮಹದೇವ್ ಅವರು ಶಾಸಕ ಕೆ.ಹರೀಶ್‌ಗೌಡ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಸನ್ಮಾನಿಸಿ, ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಸಂಪೂರ್ಣ ಬೆಂಬಲ ಕೊಡುವುದಾಗಿ ಆಶ್ವಾಸನೆ ನೀಡಿದರು.

ಮಾರುಕಟ್ಟೆಯ ಪ್ರಮುಖ ಮುಖಂಡರಾದ ಹೇಮಣ್ಣ ಸೇರಿದಂತೆ ಇತರರನ್ನು ಭೇಟಿ ವಾಡಿ ಹೆಚ್ಚಿನ ಬೆಂಬಲ ನೀಡುವಂತೆ ತಿಳಿಸಿದರು.

ದೇವರಾಜ ಮಾರುಕಟ್ಟೆಯ ಅಂಗಡಿಗಳ ವಾಲೀಕರು, ವ್ಯಾಪಾರಿಗಳು ಹಾಗೂ ಸಿಬ್ಬಂದಿ ಐದು ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ನಾವು ಪಡೆದುಕೊಳ್ಳುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಕಾರ್ಯಕ್ರಮಗಳನ್ನು ಒಪ್ಪಿಕೊಂಡಿದ್ದೇವೆ ಹಾಗಾಗಿ ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಬೆಂಬಲಿಸಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸುವುದಾಗಿ ಭರವಸೆ ನೀಡಿದರು.

ಕಾಂಗ್ರೆಸ್ ಮುಖಂಡರಾದ ಎಂ.ಶಿವಣ್ಣ, ಜೆ.ಗೋಪಿ ಮತ್ತು ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.

Tags: