Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

2 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ: ವಿದೇಶಿಗನ ಬಂಧನ

ಬೆಂಗಳೂರು: ಬೆಂಗಳೂರು ಪೊಲೀಸರು ಐವರಿ ಕೋಸ್ಟ್ ಪ್ರಜೆಯೊಬ್ಬನನ್ನು ಬಂಧಿಸಿದ್ದು ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳಕ್ಕೆ ಸಿಕ್ಕ ಮಾಹಿತಿ ಮೇರೆಗೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ತಂಡವು ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 33 ವರ್ಷದ ಸೆಕಾ ಘಿಸ್ಲೇನ್ ತಾನೊ ಎಂಬಾತನನ್ನು ಬೊಮ್ಮನಹಳ್ಳಿಯಲ್ಲಿ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ತಿಳಿಸಿದ್ದಾರೆ.

ಸೆಕಾ ಘಿಸ್ಲೇನ್ ಬಳಿಯಿದ್ದ ಮೊಬೈಲ್ ಫೋನ್ ಮತ್ತು ತೂಕದ ಯಂತ್ರದೊಂದಿಗೆ ಬಿಳಿ, ಕಂದು, ಹಳದಿ ಮತ್ತು ಗುಲಾಬಿ ಸೇರಿದಂತೆ ಎರಡು ಕೆಜಿ ಎಂಡಿಎಂಎ (ಮೆಥಿಲೀನ್ ಡಿಯೋಕ್ಸಿ ಮೆಥಾಂಫೆಟಮೈನ್) ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

2022ರಲ್ಲಿ ವ್ಯಾಪಾರ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದ ಸೆಕಾ ಘಿಸ್ಲೇನ್ ನಂತರ ಮುಂಬೈ ಮತ್ತು ದೆಹಲಿಯಲ್ಲಿ ಗಾರ್ಮೆಂಟ್ ವ್ಯಾಪಾರದಲ್ಲಿ ತೊಡಗಿಸಿಕೊಂಡಿರುವುದಾಗಿ ಸುಳ್ಳು ಹೇಳಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಎಂದು ದಯಾನಂದ ತಿಳಿಸಿದರು.

Tags: