Mysore
23
broken clouds
Light
Dark

ನನ್ನ ತೆರಿಗೆ ನನ್ನ ಹಕ್ಕು ಎಂದು ಬೆಂಗಳೂರಿಗರು ಹೇಳಿದ್ರೆ ಏನ್ಮಾಡ್ತೀರಿ: ನಿರ್ಮಲಾ ಸೀತಾರಾಮನ್‌‌

ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದ ರಾಜ್ಯ ಸರ್ಕಾರಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿರುಗೇಟು ನೀಡಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಮಾಧ್ಯಮ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ನೀರಿನ ಸಮಸ್ಯೆ ವಿಚಾರ ಪ್ರಸ್ತಾಪಿಸಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗದುಕೊಂಡರು. ನನ್ನ ತೆರಿಗೆ ನನ್ನ ಹಕ್ಕು ಘೋಷಣೆ ಸರಿ ಇದೆ. ಬೆಂಗಳೂರಿನ ಜನ ಇದೇ ಮಾತು ಕೇಳಿದ್ರೆ ಏನು ಹೇಳ್ತೀರಾ? ಬೆಂಗಳೂರು ಅಭಿವೃದ್ಧಿ ಆಗಬೇಕು. ನನ್ನ ತೆರಿಗೆ ನನಗೆ ಕೊಡಿ ಅಂದರೆ ಏನು ಹೇಳ್ತಿರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಕರ್ನಾಟಕದ ಬರ ಪರಿಹಾರ ಅನುದಾನ ಬಿಡುಗಡೆ ವಿಳಂಬಕ್ಕೆ ಕೇಂದ್ರ ಸರ್ಕಾರ ಕಾರಣವಲ್ಲ. ಉನ್ನತಾಧಿಕಾರಿ ಸಮಿತಿ ಸಭೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಅನುಮತಿ ಬಾರದಿರುವುದರಿಂದ ವಿಳಂಬಕ್ಕೆ ಕಾರಣವಾಗಿದೆ. ಕರ್ನಾಟಕ ಮಾತ್ರವಲ್ಲ, ತೆಲಂಗಾಣ, ತಮಿಳುನಾಡು, ಸಿಕ್ಕಿಂ, ಮಿಜೋರಾಂ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿಯಡಿ ನೆರವು ನೀಡುವ ಪ್ರಸ್ತಾವನೆಗಳಿಗೆ ಉನ್ನತಾಧಿಕಾರಿ ಸಮಿತಿ ಮುಂದಿವೆ. ಚುನಾವಣೆ ಆಯೋಗದ ಅನುಮತಿ ದೊರಕಿದ ಬಳಿಕವೇ ನೀರ್ಮಾನ ಕೈಗೊಳ್ಳಬೇಕಿದೆ ಎಂದು ಹೇಳಿದರು.

ತೆರಿಗೆ ವಿಚಾರದಲ್ಲಿ ಬಹಿರಂಗ ಚರ್ಚೆಗೆ ನಿಮಗೆ ಆಹ್ವಾನವಿದೆಯಲ್ಲಾ? ಎಂಬ ಪ್ರಶ್ನೆಗೆ ಉತ್ತರಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಿರಾಕರಿಸಿದರು.