Mysore
23
clear sky

Social Media

ಮಂಗಳವಾರ, 20 ಜನವರಿ 2026
Light
Dark

ಬಿಜೆಪಿ ಶಾಸಕ ಯತ್ನಾಳ್‌ ವಿರುದ್ಧ ದೂರು: ಕಾರಣ ಇಲ್ಲಿದೆ ನೋಡಿ?!

ಬೆಂಗಳೂರು: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮತ್ತು ಅವರ ಕುಟುಂಬದವರನ್ನು ದೇಶ ವಿರೋಧಿಗಳು ಎಂದು ನಿಂದಿಸಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸರವಣನ್‌ ಶೇಷಾದ್ರಿಪುರಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಇಂದು (ಏ.೬) ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌, ರಾಮೇಶ್ವರ ಕೆಫೆ ಸ್ಟೋಟ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟ ಬಿಜೆಪಿ ಕಾರ್ಯಕರ್ತನ ಪರವಾಗಿ ಸಮರ್ಥನೆ ಮಾಡುವ ಸಂಬಂಧ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರು, ಸಚಿವರಾದ ದಿನೇಶ್‌ ಗುಂಡೂರಾವ್‌ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ, ದೇಶವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ ಎಂದು ಹೇಳಿದ್ದರು.

ಈ ಹೇಳಿಕೆಯನ್ನು ಉಲ್ಲೇಖಿಸಿರುವ ಶರವಣನ್‌, ಇಂತಹ ಹೇಳಿಕೆ ಮೂಲಕ ಇಡೀ ಕುಟುಂಬವನ್ನು ಅವಹೇಳನ ಮಾಡಿ ನಿಂದಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಕೋಮು ಸೌಹಾರ್ದ ಹಾಳು ಮಾಡುವ ದುರದ್ದೇಶದಿಂದ ದಿನೇಶ್‌ ಗುಂಡೂರಾವ್‌ ಅವರ ಕುಟುಂದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಸವನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಯತ್ನಾಳ್‌ ಹೇಳಿಕೆಗೆ ತಿರುಗೇಟು ನೀಡಿರುವ ದಿನೇಶ್‌ ಗುಂಡೂರಾವ್‌ ಪತ್ನಿ ತಬು ರಾವ್‌ ದಿನೇಶ್‌ ಗುಂಡೂರಾವ್‌ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಯತ್ನಾಳ್‌ ಅವರ ಹೇಳಿಕೆಯು ಅವಹೇಳನಕಾರಿ ಮತ್ತು ಮಾನಹಾನಿಕಾರವಾಗಿದೆ. ನಾನು ಮುಸಲ್ಮಾನಳಾಗಿ ಹುಟ್ಟಿರಬಹುದು. ಹಾಗೆಂದು ನನ್ನ ಭಾರತೀಯತೆಯನ್ನು ಯಾರು ಪ್ರಶ್ನಿಸಲು ಸಾಧ್ಯವಿಲ್ಲ. ಭಾರತೀಯ ಚುನುವಣಾ ಆಯೋಗ ಈ ಸಂಬಂಧ ಕ್ರಮ ಕೈಗೊಳ್ಳಲಿದೆಯೇ? ಪ್ರಧಾನಿ ಮೋದಿ, ಜೆಪಿ ನಡ್ಡಾ ಅವರು ಈ ವಿರುದ್ಧ ಕ್ರಮ ಕೈಗೊಳ್ಳುತ್ತಾರೆಯೆ? ಎಂದು ಪ್ರಶ್ನಿಸಿದ್ದಾರೆ.

Tags:
error: Content is protected !!