Mysore
27
overcast clouds

Social Media

ಗುರುವಾರ, 16 ಏಪ್ರಿಲ 2026
Light
Dark

ಗೋಪಿನಾಥಂನ ಮೈಲುಮಲೈ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ

ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಗೋಪಿನಾಥಂನ ಮೈಲುಮಲೈ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 15 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ.

ಬೆಂಕಿ ಕಾಣಿಸಿಕೊಂಡಿದ್ದ ಬಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಬೆಂಕಿ ನಂದಿಸಲು ಮುಂದಾದರು. ಬಳಿಕ ಆಗಮಿಸಿದ ಅರಣ್ಯಾಧಿಕಾರಿಗಳು ಹಾಗೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.

ಈ ಬಗ್ಗೆ ಕಾವೇರಿ ವನ್ಯಧಾಮದ ಎಸಿಎಫ್‌ ಅಂಕರಾಜು ಪ್ರತಿಕ್ರಿಯಿಸಿ, ಮೈಲುಮಲೈ ಅರಣ್ಯದಲ್ಲಿ ಬೇಸಿಗೆಯಲ್ಲೂ ಹಸಿರಿನಿಂದ ಕೂಡಿರುವ ಪ್ರದೇಶವಾಗಿದೆ. ಈ ಭಾಗದಲ್ಲಿ ಏಳು ವರ್ಷದ ನಂತರ ಬೆಂಕಿ ಬಿದ್ದಿದ್ದೆ. ಈಗಾಗಲೇ ಬೆಂಕಿ ನಂದಿಸಲಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ 20ಕ್ಕೂ ಸಿಬ್ಬಂದಿ ಅರಣ್ಯ ಪ್ರದೇಶದಲ್ಲೇ ಬೀಡು ಬಿಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Tags:
error: Content is protected !!