Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸೈನಿಕ ಶಾಲೆಗಳ ಖಾಸಗೀಕರಣ ವಿರುದ್ಧ ರಾಷ್ಟ್ರಪತಿಗೆ ಖರ್ಗೆ ಪತ್ರ

ಹೊಸದಿಲ್ಲಿ: ದೇಶದಲ್ಲಿರುವ ಸೈನಿಕ ಶಾಲೆಗಳನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಸೈನಿಕ ಶಾಲೆಗಳ ಖಾಸಗೀಕರಣ ಯೋಜನೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಜೊತೆಗ ಈ ನಿಟ್ಟಿನಲ್ಲಿ ಮಾಡಿಕೊಂಡಿರುವ ಒಪ್ಪದಗಳನ್ನು ರದ್ದಪಡಿಸಬೇಕು ಎಂದು ಪತ್ರದಲ್ಲಿ ಖರ್ಗೆ ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಸೈನಿಕ ಶಾಲೆಗಳನ್ನು ಖಾಸಗೀಕರಣಗೊಳಿಸರುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಕಾಂಗ್ರೆಸ್‌ ಹೇಳಿದೆ. ಕೇಂದ್ರದ ಈ ನಿರ್ಧಾರದಿಂದ ದೇಶದಲ್ಲಿನ 33 ಸೈನಿಕ ಶಾಲೆಗಳ ಪೈಕಿ ಶೇ.62 ಶಾಲೆಗಳು ಬಿಜೆಪಿ-ಆರ್‌ಎಸ್‌ಎಸ್‌ ನಾಯಕರ ಕೈಸೇರಲಿವೆ ಎಂದು ಖರ್ಗೆ ಕಿಡಿಕಾರಿದ್ದಾರೆ.

Tags: