Mysore
26
scattered clouds

Social Media

ಶುಕ್ರವಾರ, 30 ಜನವರಿ 2026
Light
Dark

ಏ.14 ರಂದು ಮೈಸೂರು, ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿಯು ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ ಎಂಬ ಹೊಸ ಪ್ರಚಾರ ಅಭಿಯಾನಕ್ಕೆ ವೇದಿಕೆ ಸಜ್ಜಾಗಿದೆ.

ಈ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನೀಲ್‌ ಕುಮಾರ್‌, ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಸ್ಟಾರ್‌ ಪ್ರಚಾರಕರನ್ನು ಹೊರತುಪಡಿಸಿ ಕೇವಲ ಮೋದಿ ಅಭಿಮಾನಿಗಳನ್ನಷ್ಟೇ ಬಳಸಿಕೊಂಡು ಅಭಿಯಾನ ಆಯೋಜಿಸಲಾಗುತ್ತಿದೆ. ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇದೇ 21 ಹಾಗೂ ಎರಡನೇ ಸುತ್ತಿನಲ್ಲಿ ಮತದಾನ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇದೇ 28ರಂದು ಅಭಿಯಾನ ನಡೆಯಲಿದೆ ಎಂದು ಹೇಳಿದರು.

ಏ.21ರ ಅಭಿಯಾನದಲ್ಲಿ ಬೆಂಗಳೂರು ಸೇರಿದಂತೆ ನಗರ ಪ್ರದೇಶ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ ನಿವಾಸಿಗಳು, ನಿವೃತ್ತ ಅಧಿಕಾರಿಗಳು, ಚಿತ್ರನಟರು, ಕಲಾವಿದರು, ಐಟಿ ಸೇರಿದಂತೆ ನಾನಾ ವೃತ್ತಿಯವರು ಮೋದಿ ಪರಿವಾರದ ಭಾಗವಾಗಲು ಆಸಕ್ತಿ ತೋರಿದ್ದು, ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಅಭಿಮಾನಿಗಳು ವಾರಾಂತ್ಯದ ಒಂದು ದಿನವನ್ನು ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿಸುವ ಪ್ರಯತ್ನಕ್ಕೆ ತಮ್ಮ ಸಮಯ ವಿನಿಯೋಗಿಸುತ್ತಾರೆ ಎಂದು ತಿಳಿಸಿದರು.

ಮೈಸೂರಿನಲ್ಲಿ ಏಪ್ರಿಲ್‌ 14 ರಂದು ಮೈಸೂರಿನಲ್ಲಿ ಮೋದಿ ರ್ಯಾಲಿ ನಡೆಸಲಿದ್ದಾರೆ. ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ವೇದಿಕೆ ಹಂಚಿಕೊಳ್ಳುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.
ದೇವೇಗೌಡರ ಉಪಸ್ಥಿತಿಯಿಂದ ಹಳೇ ಮೈಸೂರು ಭಾಗದಲ್ಲಿ ತಮ್ಮ ಪಕ್ಷಕ್ಕೆ ಬಲ ಬರಲಿದೆ, ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದಿವೆ ಮೂಲಗಳು.

ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆ ವರೆಗೆ ಸುಮಾರು 2 ಕಿ.ಮೀ ವರೆಗೆ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಇದು ಬಲ್ಲಾಳ್‌ಬಾಗ್, ಪಿವಿಎಸ್ ಜಂಕ್ಷನ್ ಮತ್ತು ನವಭಾರತ ವೃತ್ತದ ಮೂಲಕ ಹಾದುಹೋಗುತ್ತದೆ. ರೋಡ್ ಶೋ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲು ಪಕ್ಷವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಿದೆ ಎಂದು ಹೇಳಿದರು. ಮಂಗಳೂರು ನಗರ ದಕ್ಷಿಣ, ಮಂಗಳೂರು ನಗರ ಉತ್ತರ, ಮಂಗಳೂರು, ಮೂಡುಬಿದಿರೆಯಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

Tags:
error: Content is protected !!