ಮೈಸೂರು : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಇಂದು ಕಲಾಮಂದಿರದ ಸುಚಿತ್ರ ಗ್ಯಾಲರಿಯಲ್ಲಿ ವಚನಕಾರಾದ ದೇವರ ದಾಸಿಮಯ್ಯ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ದೇವರ ದಾಸಿಮಯ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್ ಹಾಗೂ ಸಮುದಾಯದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.