ಮುಂಬೈ : ಮುಂಜಾನೆ 5ಗಂಟೆ ಸುಮಾರಿಗೆ ಬಾಂದ್ರಾದಲ್ಲಿರುವ ಬಾಲಿವುಡ್ ಬಾಯ್‌ಜಾನ್ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ನಿವಾಸದ ಹೊರಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿರುವ ಘಟನೆ ನಡೆದಿದೆ.
ಇಬ್ಬರೂ ಶೂಟರ್ ಗಳು ಬೈಕ್ ನಲ್ಲಿ ಬಂದು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ.
ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ.
ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಡಿಸಿಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಮುಂಬೈ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಶುರು ಮಾಡಿದ್ದಾರೆ. ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.