Mysore
31
few clouds

Social Media

ಶುಕ್ರವಾರ, 01 ಮೇ 2026
Light
Dark

UPSC: ಮೈಸೂರಿಗ ಲೇಖನ್‌ಗೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ 777ನೇ ರ‍್ಯಾಂಕ್!

ಮೈಸೂರು: ತಾಲೂಕಿನ ಹುಣಸೂರು ಗ್ರಾಮದ ಪ್ರತಿಭೆ ಲೇಖನ್‌ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ 777ನೇ ರ್ಯಾಂಕ್‌ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ತಿಪ್ಪಲಾಪುರ ಗ್ರಾಮದ ನಿವಾಸಿ, ದಿ.ಎಲ್.ಮಹದೇವ ಹಾಗೂ ಕೆ.ಟಿ.ಶೈಲಜಾ ದಂಪತಿ ಪುತ್ರ ಇವರಾಗಿದ್ದಾರೆ. ಇವರು ಯಾವುದೇ ತರಗತಿಗೆ ಸೇರದೇ, ತರಬೇತಿ ಪೆಡೆಯದೇ ಮನೆಯಲ್ಲಿಯೇ ನಿರಂತರ ಅಭ್ಯಾಸ ನಡೆಸಿ ಯುಪಿಎಸ್‌ಸಿಯಲ್ಲಿ ಯಶಸ್ಸು ಕಂಡಿದ್ದಾರೆ.

ಲೇಖನ್‌ ಹನಗೋಡಿನ ಲಕ್ಷ್ಮಣತೀರ್ಥ ವಿದ್ಯಾ ಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ, ಹುಣಸೂರಿನ ರೋಟರಿ ವಿದ್ಯಾ ಸಂಸ್ಥೆಯಲ್ಲಿ ಪ್ರಾಥಮಿಕ, ಫ್ರೌಢಶಿಕ್ಷಣ ನಂತರ ಮೂಡುಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಪಿಯು ಮುಗಿಸಿ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಇಂಜಿನಿರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

 

Tags:
error: Content is protected !!