ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಯೋಜನೆಗಳು ಕೇವಲ ತಾತ್ಕಾಲಿಕವಾಗಲಿದೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾತ್ಕಾಲಿಕ ಎಂದರೇನು? ವಿಜಯೇಂದ್ರ ಏನು ಶಾಸ್ತ್ರ ಹೇಳ್ತಾರಾ? ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಗ್ಯಾರೆಂಟಿಗಳು ತಾತ್ಕಾಲಿಕವಲ್ಲ, ಈ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ. ಮುಂದಿನ ಅವಧಿಯವರೆಗೂ ಕೂಡಾ ಈ ಗ್ಯಾರೆಂಟಿಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಮಾಡುತ್ತೇವೆ. ಜೊತೆಗೆ ಮುಂದಿನ ಬಜೆಟ್‌ನಲ್ಲಿ ಗ್ಯಾರೆಂಟಿಗಳಿಗಾಗಿ 52 ಸಾವಿರ ಕೋಟಿ ರೂ. ಮೀಸಲಿಡುತ್ತೇವೆ ಎಂದು ಹೇಳಿದರು.
ರಾಜ್ಯಾದ್ಯಂತ ಈ ಬಾರಿ ಕಾಂಗ್ರೆಸ್‌ಗೆ ಉತ್ತ ಸ್ಪಂದನೆಯಿದ್ದು, 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.





