Mysore
23
scattered clouds

Social Media

ಶುಕ್ರವಾರ, 09 ಜನವರಿ 2026
Light
Dark

ಸ್ವಾಭಿಮಾನಕ್ಕೆ ಧಕ್ಕೆಯಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದೆ: ಸಂಗಣ್ಣ ಕರಡಿ

ಕೊಪ್ಪಳ: ಪ್ರಜಾಪ್ರಭೂತ್ವದಲ್ಲಿ ಟೀಕೆ ಟಿಪ್ಪಣಿಗಳು ಸಹಜ, ನನಗೆ ಟಿಕೆಟ್‌ ಸಿಗದ ಕಾರಣ ನಾನು ಬಿಜೆಪಿ ತೊರೆಯುತ್ತಿಲ್ಲ. ಬಿಜೆಪಿಯಲ್ಲಿ ಸಾಮ್ಯತೆಯಿಲ್ಲ, ಇದರಿಂದ ಬೇಸರಗೊಂಡು ಸ್ವಾಭಿಮಾನಕ್ಕೆ ಧಕ್ಕೆಯಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದೆ ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದರು.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್‌ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರ ಉಪಸ್ಥಿತಿಯಲ್ಲಿ ಕಾಂಗ್ರೆಸ್‌ ಸೇರಿದೆ. ಇಲ್ಲಿ ಎಲ್ಲರೂ ನನ್ನನ್ನು ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಯಾವುದೇ ಬೇಡಿಕೆಯಿಲ್ಲದೇ ನಾನು ಕಾಂಗ್ರೆಸ್‌ ಸೇರಿದ್ದಾನೆ. ಮತ್ತು ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಸಿಎಂ ಬಳಿ ಮನವಿ ಮಾಡಿರುವುದಾಗಿ ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ್‌ ಹಿಟ್ನಾಳ್‌ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ. ಬಿಜೆಪಿಯವರು ಅಭಿವೃದ್ಧಿ ವಿಚಾರ ಕೇಳಲಿಲಲ್ಲ. ಈ ಭಾಗದ ಚರ್ಚೆಗೆ ಅವರು ಸಿದ್ದವಿರಲಿಲ್ಲ, ಕೇವಲ ಮೋದಿ ಹೆಸರಿನಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಹೇಳುತ್ತಾರೆ. ಈ ಎಲ್ಲಾ ನಡವಳಿಕೆ ಬೇಸರ ತಂದು ನಾನು ಬಜೆಪಿ ತೊರೆದೆ ಎಂದು ಅವರು ಹೇಳಿದ್ದಾರೆ.

Tags:
error: Content is protected !!