Mysore
26
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಕುಸಿದ ಕಾನೂನು ಸುವ್ಯವಸ್ಥೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ:  ಆರ್‌.ಅಶೋಕ ಆಗ್ರಹ

ಆನೇಕಲ್‌ :  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಪರ ಚುನಾವಣಾ ಪ್ರಚಾರದಲ್ಲಿ ಅವರು ಪಾಲ್ಗೊಂಡರು.

ಬಳಿಕ ಬಿದಿರುಕುಪ್ಪೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ತಾಲಿಬಾನ್‌ ಸರ್ಕಾರ ಆಡಳಿತ ನಡೆಸುತ್ತಿದೆ. ಕಾನೂನು ಸುವ್ಯವಸ್ಥೆ ಪೂರ್ತಿ ಹದಗೆಟ್ಟು ಜನರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು ಎಂಬ ಮನಸ್ಥಿತಿಯನ್ನು ದುಷ್ಟ ಕಾಂಗ್ರೆಸ್‌ ಉಂಟುಮಾಡಿದೆ.

ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ. ನೀವು ನಮ್ಮ ಮತಬ್ಯಾಂಕ್‌ ಆಗಿದ್ದು, ನಿಮ್ಮ ಪೂರ್ತಿ ರಕ್ಷಣೆ ಮಾಡುತ್ತೇವೆ ಎಂದು ಸರ್ಕಾರವೇ ಹೇಳಿದೆ.

ಜೈ ಶ್ರೀರಾಮ್‌ ಎಂದರೆ, ಮೋದಿ ಕುರಿತು ಹಾಡು ಹಾಕಿದರೆ ಹೊಡೆಯುತ್ತಾರೆ. ಪಾಕ್‌ ಜಿಂದಾಬಾದ್‌ ಎಂದವರಿಗೆ ಬಿರಿಯಾನಿ ಜೊತೆಗೆ ಪಾಸ್‌ ಕೂಡ ಕೊಡುತ್ತಾರೆ ಎಂದರು.

Tags:
error: Content is protected !!