Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಚಾ.ನಗರ ಸಂಸದ ಶ್ರೀನಿವಾಸ್‌ ಪ್ರಸಾದ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಿನ್ನೆ ತಡರಾತ್ರಿ(ಸೋಮವಾರ, ಏ.೨೨) ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಲಿನಲ್ಲಿ ಗಾಯವಾಗಿದ್ದ ಹಿನ್ನಲೆಯಲ್ಲಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಕುಟುಂಬ ಅವರನ್ನು ಬೆಂಗಳೂರಿನ ಮಣಿಪಾಲ್‌ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದೇ ಮಾರ್ಚ್ ನಲ್ಲಿ ತಾವು ರಾಜಕೀಯಕ್ಕೆ ಬಂದು 50 ವರ್ಷಗಳು ಪೂರೈಸಿದ ದಿನದಂದೇ ತಾವು ಸಕ್ರಿಯ ರಾಜಕೀಯದಿಂದ ದೂರ ಉಳಿಯುವುದಾಗಿ ಹೇಳಿದ್ದರು. ಅದರಂತೆ ಏಪ್ರಿಲ್‌ ತಿಂಗಳಲ್ಲಿ ಮೈಸೂರಿಗೆ ಪ್ರಧಾನಿ ಮೋದಿ ಭೆಟಿಯಾದಾಗಲು ಅವರನ್ನು ಭೇಟಿಯಾಗಲು ಪ್ರಸಾದ್‌ ನಿರಾಕರಿಸಿದ್ದರು. ತಮಗೆ ಆರೋಗ್ಯದಲ್ಲಿ ವಿಪರೀತ ಏರುಪೇರಾಗಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುವುದಿಲ್ಲ ಎಂದು ಬಿ.ಎಸ್‌ ಯಡಿಯೂರಪ್ಪ ಅವರಿಗೆ ನೇರವಾಗಿ ಹೇಳಿದ್ದರು.

ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಶ್ರೀನಿವಾಸ್‌ ಪ್ರಸಾದ್‌ ಅವರ ಮನೆಗೆ ವಯಕ್ತಿಕವಾಗಿ ಭೇಟಿ ಆರೋಗ್ಯ ವಿಚಾರಿಸಿದ್ದರು. ಇದರ ಬೆನ್ನಲ್ಲೇ ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಐಸಿಯುನ ವೆಂಟಿಲೇಟ್‌ರನಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ.

Tags: