Mysore
34
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ಮೋದಿ ಸಾಧನೆಯೊಂದಿಗೆ ಈ ಬಾರಿಯ ಚುನಾವಣೆ ಎದುರಿಸುತ್ತೇವೆ: ಮಾಳವಿಕಾ

ಮೈಸೂರು: ಏ.26 ರಂದು ನೆಡೆಯುವ ಲೋಕಸಭಾ ಚುನಾವಣೆಗೆ ನಾವು ಸಿದ್ದರಿದ್ದು, ಈ ಬಾರಿಯ ಚುನಾವಣೆಯನ್ನು ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸಾಧನೆಗಳನ್ನು ಮುಂದಿಟ್ಟು ಚುನಾವಣೆ ಎದುರಿಸಲಿದ್ದೇವೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್‌ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯನ್ನು ಪ್ರಧಾನಿ ಮೋದಿ ಅವರ ಅಭಿವೃದ್ಧಿಯ ಆಧಾರದಲ್ಲಿ ಎದುರಿಸುತ್ತೇವೆ. ಮೋದಿ ಅವರು ಪ್ರಧಾನಿ ಅಗುವ ಮುಂಚೆ ದೇಶದ ಆರ್ಥಿಕತೆ ಸುಧಾರಿಸಿಲಿಲ್ಲ. ಮೋದಿ ನಂತರ ದೇಶದ ಆರ್ಥಿಕತೆ ಉತ್ತವಾಗಿದೆ ಎಂದರು.

ದೇಶದ ಮಹಿಳೆಯರನ್ನು ಶಸಕ್ತರನ್ನಾಗಿ ಮಾಡುವುದು ಪ್ರಧಾನಿ ಮೋದಿ ಅವರ ಉದ್ದೇಶವಾಗಿತ್ತು. ಇಂದು ನಾವು ಮಹಿಳೆಯರ ಅಭಿವೃದ್ಧಿಯತ್ತ ಸಾಗಿದ್ದೇವೆ. ನಮ್ಮ ಸಂಕಲ್ಪ 2047 ಆಗಿದೆ. ಅವತ್ತಿಗೆ ದೇಶಕ್ಕೆ ಸ್ವಾತಂತ್ರ್ಯ ಬಂದು ನೂರು ವರ್ಷಗಳು ತುಂಬಲಿದೆ. ಅದರೊಂದಿಗೆ ದೇಶವನ್ನು ಅಭಿವೃದ್ಧಿ ಭಾರತ ನಿರ್ಮಾಣ ಮಾಡಲು ಈಗಿನಿಂದಲೇ ಶ್ರಮಿಸಲಾಗುವುದು. ಅದಕ್ಕಾಗಿ ದೇಶಾದ್ಯಂತ ಈ ಬಾರಿ 370 ಸ್ಥಾನಗಳನ್ನು ಗೆಲ್ಲಲು ಸಂಕಲ್ಪ ಮಾಡಲಾಗಿದ್ದು, ರಾಜ್ಯದಿಂದ 28ಕ್ಕೆ 28 ಕ್ಷೇತ್ರಗಳನ್ನು ಗೆದ್ದು ಬಲ ನೀಡಬೇಕಿದೆ ಎಂದು ಹೇಳಿದರು.

Tags:
error: Content is protected !!