Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ನಿಮ್ಮ ಮತ ನಿಮ್ಮ ಧ್ವನಿ: ಮತದಾನಕ್ಕೆ ಕನ್ನಡದಲ್ಲೇ ಕರೆ ನೀಡಿದ ಪ್ರಧಾನಿ

ನವದೆಹಲಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ರಾಜ್ಯದಲ್ಲಿ ನಡೆಯುತ್ತಿದ್ದು, ಇಂದು ಎಲ್ಲರೂ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಕರೆ ನೀಡಿದ್ದಾರೆ.

ಅವರು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಮತದಾನಕ್ಕೆ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಅದರಲ್ಲಿ ಹಳೇ ಮೈಸೂರು ಭಾಗದ ಮೈಸೂರು-ಕೊಡಗು, ಚಾಮರಾಜನಗರ ಹಾಗೂ ಮಂಡ್ಯ ಕ್ಷೇತ್ರಗಳು ಈ ಭಾರೀ ತೀವ್ರ ಪೈಪೋಟಿ ನೀಡುತ್ತಿವೆ. ಚುನಾವಣಾ ಕೇಂದ್ರ ಬಿಂದುಗಳಾಗಿವೆ.

https://x.com/narendramodi/status/1783667620375372238

ಮೋದಿ ಟ್ವೀಟ್‌: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ! ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಬರೆದುಕೊಂಡಿದ್ದಾರೆ.

ಕರ್ನಾಟಕ ಹೊರತುಪಡಿಸಿ, ಅಸ್ಸಾಂ 5, ಬಿಹಾರ 5, ಛತ್ತೀಸ್‌ಘಡ 3, ಕೇರಳ 20, ಮಧ್ಯಪ್ರದೇಶ 7, ಮಹಾರಾಷ್ಟ್ರ 8, ಮಣಿಪುರ 1, ರಾಜಸ್ಥಾನ 13, ತ್ರಿಪುರ 1, ಉತ್ತರ ಪ್ರದೇಶ್‌ 8, ಪಶ್ಚಿಮ ಬಂಗಾಳ 3, ಜಮ್ಮು ಮತ್ತು ಕಾಶ್ಮೀರಾ 1 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

Tags: