Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ನೋಟಾಗೆ ಹೆಚ್ಚು ಮತ ಬಂದರೆ ಮರುಚುನಾವಣೆ : ಸುಪ್ರೀಂ ಕೋರ್ಟ್‌ ನೋಟೀಸ್‌

ನವದೆಹಲಿ : ಲೋಕಸಭಾ ಚುನಾವಣೆಗೆ ಇಂದು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತದಾನ ನಡೆಯುತ್ತಿದೆ. ಈ ವೇಳೆಯಲ್ಲಿ ನೋಟಾಗೆ ಹೆಚ್ಚು ಮತ ಬಂದರೆ ಮರುಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ.

ನೋಟಾಗೆ ಹೆಚ್ಚು ಮತ ಬಂದರೆ ಮರುಚುನಾವಣೆ ನಡೆಸುವ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಯನ್ನು ಗಣನೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.

ಚುನಾವಣೆಯಲ್ಲಿ ನೋಟಾಗೆ ಅತಿ ಹೆಚ್ಚು ಮತ ಬಂದರೆ, ಆ ಕ್ಷೇತ್ರದಲ್ಲಿ ಹೊಸದಾಗಿ ಮರುಚುನಾವಣೆ ನಡೆಸಬೇಕು ಹಾಗೂ ನೋಟಾಗಿಂತ ಕಡಿಮೆ ಮತ ಪಡೆಯುವ ಅಭ್ಯರ್ಥಿಯನ್ನು ಮರು ಚುನಾವಣೆಗೆ ನಿಷೇಧಿಸಬೇಕು. ಚುನಾವಣೆಯಲ್ಲಿ ಸ್ಪರ್ಧಿಸದಂತೆ ಸೂಚಿಸಬೇಕೆಂದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು.

Tags: