Mysore
13
scattered clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಬಿಜೆಪಿ ಭದ್ರಕೋಟೆ ಬೆಳಗಾವಿಗೆ ಏಕಕಾಲಕ್ಕೆ ಮೋದಿ, ಸಿದ್ದು ಎಂಟ್ರಿ

ಬೆಳಗಾವಿ: ಎರಡು ದಶಕಗಳಿಂದ ಬಿಜೆಪಿ ಭದ್ರಕೊಟೆಯಾಗಿರುವ ಬೆಳಗಾವಿ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಕಸರತ್ತು ನಡೆಸುತ್ತಿದ್ದು, ಇತ್ತ ಕಾಂಗ್ರೆಸ್ ಕೂಡ ಕ್ಷೇತ್ರ ಕಿತ್ತುಕೊಳ್ಳಲು ಹರಸಾಹಸ ಪಡುತ್ತಿದೆ.

ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದ ಮತದಾನ ಏ.26 ರಂದು(ನಿನ್ನೆ) ನಡೆದಿದೆ. ಇನ್ನುಳಿದ 14 ಕ್ಷೇತ್ರಗಳಿಗೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಗಾವಿ ಕ್ಷೇತ್ರಕ್ಕೂ ಕೂಡ ಅಂದೇ ಮತದಾನ ನಡೆಯಲಿದೆ.

ಈ ಸಂಬಂಧ ಎರಡು ಪಕ್ಷಗಳ ಪ್ರಚಾರ ಅಬ್ಬರವಾಗಿದ್ದು, ನಾಳೆ (ಏ. 28) ರಂದು ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಏಕಕಾಲಕ್ಕೆ ಭೇಟಿ ನೀಡಿ ಮತದಾರರಿಗೆ ಧಾಳ ಬೀಸಲಿದ್ದಾರೆ.

ಏ.28 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಮಾಲಿನಿ ನಗರದಲ್ಲಿ ಬೃಹತ್ ಸಮಾವೇಶ ನಡೆಸಿ ಚಿಕ್ಕೋಡಿ, ಬೆಳಗಾವಿ ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಮೋದಿ ಮತಪ್ರಚಾರ ಮಾಡಲಿದ್ದಾರೆ. ಇದೇ ವೇಳೆ ಇತ್ತ ಸಿಎಂ ಸಿದ್ದರಾಮಯ್ಯ ಕೂಡ ಚಿಕ್ಕೊಡಿ ವ್ಯಾಪ್ತಿಯ ಉಗಾರ್ ಖುರ್ದ್ ಹಾಗೂ ಬೆಳಗಾವಿ ವ್ಯಾಪ್ತಿಯ ಯರಗಟ್ಟಿಹಳ್ಳಿಯ ಸಮಾವೇಶದಲ್ಲಿ ಪಾಲ್ಗೊಳಲಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಹಾಗೂ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಕಣದಲ್ಲಿದ್ದಾರೆ.

Tags:
error: Content is protected !!