ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದ ಅಡಿಯಲ್ಲಿ ಬಾಲಿವುಡ್ ನಟ ಸಾಹಿಲ್ ಖಾನ್ ಅವರನ್ನು ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ ಛತ್ತೀಸ್‌ಗಢದಲ್ಲಿ ಬಂಧಿಸಿದೆ.
ಸಾಹಿಲ್ ಖಾನ್ ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ನಂತರ ನಟನನ್ನು ಇಂದು ( ಏಪ್ರಿಲ್ 28 ) ಛತ್ತೀಸ್‌ಗಢದ ಜಗದಲಪುರದಲ್ಲಿ ಬಂಧಿಸಲಾಗಿದೆ.
ಬೆಟ್ಟಿಂಗ್ ಅಪ್ಲಿಕೇಶನ್‌ನ 15 ಸಾವಿರ ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಇತ್ತೀಚೆಗೆ ಸಾಹಿಲ್ ಅವರನ್ನು ವಿಚಾರಣೆ ನಡೆಸಿತ್ತು. ಕೆಲ ಹಣಕಾಸು ಹಾಗೂ ರಿಯಲ್ ಎಸ್ಟೇಟ್ ಸಂಸ್ಥೆಗಳು ಮತ್ತು ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನ ಪ್ರವರ್ತಕರ ನಡುವಿನ ಅಕ್ರಮ ಹಣ ವಹಿವಾಟಿನ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿ ಸಾಹಿಲ್ ಖಾನ್ ಸೇರಿದಂತೆ 31 ವ್ಯಕ್ತಿಗಳ ವಿರುದ್ಧ ತನಿಖೆ ನಡೆಸುತ್ತಿದೆ.