Mysore
24
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ತನಿಖೆಯಲ್ಲಿ ತಪ್ಪು ಸಾಬೀತು ಆದರೆ, ಯಾರೇ ಆದರು ಶಿಕ್ಷೆ ಆಗಲೇ ಬೇಕು : ಹೆಚ್‌ಡಿಕೆ !

ಬೆಂಗಳೂರು : ಹಾಸನದ ಸಿಡಿ ವಿಚಾರವಾಗಿ ತನಿಖೆಗೆ ಆದೇಶ ಮಾಡಲಾಗಿದೆ, ತನಖೆಯಲ್ಲಿ ತಪ್ಪು ಸಾಬೀತಾದರೆ ಶಿಕ್ಷೆ ಆಗಲೇ ಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್‌.ಡಿ.ದೇವೇಗೌಡ ಅವರಾಗಲಿ ನಾನಾಗಲಿ ಹೆಣ್ಣು ಮಕ್ಕಳಿಗೆ ಎಂದಿಗೂ ಅನ್ಯಾಯ ಆಗಲು ಬಿಟ್ಟಿಲ್ಲ. ಅವರ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ, ಅವರ ಕಷ್ಟಗಳನ್ನು ಪರಿಹರಿಸಿ ಕಳಿಸುವ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದರು.

ಹಾಸನದ ಸಂಸದ ಪ್ರಜ್ವಲ್‌ ರೇವಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆಯಲ್ಲಿ ಎಲ್ಲಾ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಡಿರಲಿ ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂದರು.

ವಿದೇಶದಿಂದ ಅಧಿಕಾರಿಗಳು ಕರೆದು ತರುತ್ತಾರೆ : ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದರೆ ನಾನೇನು ಮಾಡಲಿ, ಎಸ್‌ಐಟಿ ತಂಡವನ್ನು ರಚಿಸಲಾಗಿದೆ. ಅಲ್ಲಿಯ ಅಧಿಕಾರಿಗಳು ಪ್ರಜ್ವಲ್‌ರನ್ನು ಕರೆತರುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

Tags: