Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಏ.29 ರಿಂದ ಪಿಯುಸಿ ಪರೀಕ್ಷೆ-2: ಎರಡನೇ ಬಾರಿ ಪರೀಕ್ಷೆ ಬರೆಯಲಿದ್ದಾರೆ ಲಕ್ಷ ವಿದ್ಯಾರ್ಥಿಗಳು!

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಪಿ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಾಗಿ ಅನುತ್ತೀರ್ಣರಾಗುವ ನಿದರ್ಶನಗಳು ಹಚ್ಚಾಗಿ ಕಂಡು ಬರುವ ಹಿನ್ನಲೆ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಶಿಕ್ಷಣ ಇಲಾಖೆ ಬಂಪರ್‌ ಆಫರ್‌ ನೀಡಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ನಡೆಸಲು ನಿರ್ಧರಿಸಿದೆ.

ಕಳೆದ ತಿಂಗಳಷ್ಟೇ ಮೊದಲ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿತ್ತು. ಅದರಲ್ಲಿ ಫೇಲಾದ ವಿದ್ಯಾರ್ಥಿಗಳು ಹಾಗೂ ಇನ್ನು ಹೆಚ್ಚಿನ ಅಂಕ ಗಳಿಸಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಿ ಪಿಯು ಪರೀಕ್ಷೆ-2 ನಡೆಸಲು ನಿರ್ಧರಿಸಿದೆ.

ಪಿಯು ಪರೀಕ್ಷೆ-2 ನ್ನು ಇದೇ ಏ.29 ಮೇ.16 ವರೆಗೆ ನಡೆಯಲಿದ್ದು, ದಾಖಲೆ ಪ್ರಮಾಣದಲ್ಲಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಪರೀಕ್ಷೆಗೆ ಮೊದಲ ಬಾರಿ ಉತ್ತೀರ್ಣರಾಗಿರುವ 32 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದಾರೆ.

ನಾಳೆ (ಸೋಮವಾರ) ಆರಂಭವಾಗಲಿರುವ ಪಿಯುಸಿ ಪರೀಕ್ಷೆ-2 ಗೆ 1,49,300 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಎಲ್ಲಾ ಪರೀಕ್ಷೆಗಳು ನಿಗದಿತ ದಿನದಂದು ಮದ್ಯಾಹ್ನ 2.15 ರಿಂದ ಸಂಜೆ 4.30 ವರೆಗೆ ನಡೆಯಲಿದೆ. ಮತ್ತು ಈ ಪರೀಕ್ಷೆಗೆ ಹಾಲ್‌ ಟಿಕೆಟ್‌ನ್ನು ಆನ್ಲೈನ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಪರೀಕ್ಷಾ ವೇಳಾಪಟ್ಟಿ

ಏ.29- ಕನ್ನಡ, ಅರೇಬಿಕ್‌
ಏ.30- ಇತಿಹಾಸ, ಭೌತಶಾಸ್ತ್ರ
ಮೇ.2- ಇಂಗ್ಲಿಷ್‌
ಮೇ.3- ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ.4- ಭೂಗೋಳ ಶಾಸ್ತ್ರ, ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಗೃಹ ವಿಜ್ಞಾನ, ಮೂಲಗಣಿತ
ಮೇ.9- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಮೇ.11- ಸಮಾಜ ಶಾಸ್ತ್ರ, ಭೂಗರ್ಭಶಾಸ್ತ್ರ, ಜೀವಶಾಸ್ತ್ರ, ವಿದ್ಯನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ.13- ಅರ್ಥಶಾಸ್ತ್ರ
ಮೇ.14- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಮೇ.15- ಹಿಂದಿ
ಮೇ.16- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೆಬಿಕ್‌, ಫ್ರೆಂಚ್‌
ಮೇ.17- ಹಿಂದುಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಬ್ಯೂಟಿ ಅಂಡ್ವೆಲ್‌ನೆಸ್‌, ಆಟೋಮೊಬೈಲ್‌, ರೀಟೈಲ್‌

Tags: