Mysore
14
overcast clouds

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ರಾಷ್ಟ್ರಪತಿಗಳ ಸಂತಾಪ

ನವದೆಹಲಿ: ಸಂಸದರು ಹಾಗೂ ಹಿರಿಯ ನಾಯಕರಾದ ಶ್ರೀನಿವಾಸ್‌ ಪ್ರಸಾದ್‌ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಸಂತಾಪ ಸೂಚಿಸಿರುವ ರಾಷ್ಟ್ರಪತಿಗಳು, ಸಂಸದರು ಹಾಗೂ ಹಿರಿಯ ನಾಯಕರಾದ ಶ್ರೀನಿವಾಸ್‌ ಪ್ರಸಾದ್‌ ಅವರು ಇನ್ನಿಲ್ಲ ಎಂದು ತಿಳಿದು ಬೇಸರವಾಗಿದೆ ಎಂದು ತಮ್ಮ ಸಂತಾಪ ತಿಳಿಸಿದ್ದಾರೆ.

ಪ್ರಸಾದ್‌ ಅವರು ಹಲವಾರು ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದು, ಸಾರ್ವಜನಿಕ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡ್ಡಿದ್ದರು. ಕರ್ನಾಟಕದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಶ್ರೀನಿವಾಸ್‌ಪ್ರಸಾದ್ ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಾಪ ತಿಳಿಸಿದ್ದಾರೆ.

Tags:
error: Content is protected !!