Mysore
17
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ರೇವಣ್ಣ ಬಂಧನದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ

ಶಿವಮೊಗ್ಗ: ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಶನಿವಾರ ಎಸ್‌ಐಟಿ ಅಧಿಕಾರಿಗಳಿಗೆ ಶರಣಾಗಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರೇವಣ್ಣ ಪ್ರಕರಣದಲ್ಲಿ ಕಾನೂನಿನ ಪ್ರಕಾರ ಎಲ್ಲಾ ಕ್ರಮಗಳು ಜರುಗಲಿವೆ. ಕಾನೂನಿಗಿಂತ ದೊಡ್ಡವರು ಯಾರಿಲ್ಲ ಎಂದಿದ್ದಾರೆ.

ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕೆಂದು ಸ್ವತಃ ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಕಾನೂನಿಗೆ ತಲೆ ಬಾಗಿ ರೇವಣ್ಣ ಎಸ್‌ಐಟಿ ತಂಡಕ್ಕೆ ಶರಣಾಗಿದ್ದಾರೆ. ಈ ನೆಲದಲ್ಲಿ ಕಾನೂನು ಅಂತಿಮ. ಕಾನೂನಿನ ಪ್ರಕಾರ ಮುಂದಿನ ಕ್ರಮ ನಡೆಯಲಿದೆ ಎಂದರು.

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಇಳಿ ವಯಸ್ಸಿನಲ್ಲಿ ಇಂತಹ ವಿದ್ಯಮಾನ ನೋಡಿ ಬೇಸರ ತಂದಿದೆ. ಆದಷ್ಟು ಬೇಗ ಸತ್ಯಾಂಶ ಹೊರಬರಬೇಕು. ದೇವೇಗೌಡರು ಈ ಬಗ್ಗೆ ಯೋಚಿಸದೆ. ತಮ್ಮ ಆರೋಗ್ಯದ ಕಡೆ ಗಮನಹರಿಸಲಿ ಎಂದು ಯಡಿಯೂರಪ್ಪ ಮನವಿ ಮಾಡಿದರು.

Tags:
error: Content is protected !!