Mysore
22
few clouds

Social Media

ಭಾನುವಾರ, 01 ಮಾರ್ಚ್ 2026
Light
Dark

ಮತದಾನ ಬಳಿಕ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಧಾನಿ

ಗುಜರಾತ್‌: ಇಂದು ದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಜೊತೆಗೆ ಗುಜರಾತ್‌ ನ ಎಲ್ಲಾ 25 ಲೋಕಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಅಹಮದಾಬಾದ್‌ನ ನಿಶಾನ್‌ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಮತದಾನ ಮಾಡಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮತದಾನ ಮಾಡಲು ಆಗಮಿಸುತ್ತಿದ್ದಂತೆ ಜನರು ಮೋದಿ ಹೆಸರಿನ ಉದ್ಘೋಷ ಕೂಗಿದರು. ಮತದಾನ ಮಾಡಲು ಬಂದ ಪ್ರಧಾನಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಾಥ್‌ ನೀಡಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನಿ, ಮತದಾನ ಎಂಬುದು ದಾನಗಳಲ್ಲಿಯೇ ಶ್ರೇಷ್ಠವಾದ ದಾನವಾಗಿದೆ. ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕನ್ನು ಪ್ರತಿಪಾದಿಸಬೇಕು ಎಂದು ಮನವಿ ಮಾಡಿದರು.

ಮತದಾನ ನಡೆಯುವ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳಿಗೆ ಅಭಿನಂದನೆಗಳು. ಚುನಾವಣಾ ಪ್ರಚಾರ ಸಕ್ರಿಯಗೊಳಿಸಲು ಹಗಲು-ರಾತ್ರಿ ಎನ್ನದೇ ಮಾಧ್ಯಮಗಳು ಸುದ್ದಿ ಪ್ರಚಾರ ಮಾಡಿದ್ದಾರೆ. ಬಿಸಿಲಿನ ಬೇಗೆ ಜಾಸ್ತಿಯಿದ್ದು, ಎಲ್ಲರೂ ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸಿ, ಈ ವೇಳೆಯಲ್ಲಿ ಹೆಚ್ಚಿನ ನೀರು ಕುಡಿಯಿರಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದರು.

ಜತೆಗೆ ರಾಜ್ಯದಲ್ಲಿ ಉಳಿದ 14 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ರಾಜ್ಯದಲ್ಲಿ ಹೆಚ್ಚಿನ ಮತದಾನ ಮಾಡುವಂತೆ ಪಿಎಂ ಮೋದಿ ಅವರು, ಕನ್ನಡದಲ್ಲಿ ಟ್ವೀಟ್‌ ಮಾಡಿ ಮತದಾನಕ್ಕೆ ಹುರಿದುಂಬಿಸಿದ್ದಾರೆ.

Tags:
error: Content is protected !!