Mysore
28
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಮೆಗಾಸ್ಟಾರ್‌ ಚಿರಂಜೀವಿ

ತೆಲುಗು ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ ಸ್ಮರಿಸಿ ತೆಲುಗು ನಟ ಮಗಾಸ್ಟಾರ್‌ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮೇ.9 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ರಾಮ್‌ಚರಣ್‌ ದಂಪತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇನ್ನು ತನ್ನ ತಂದೆಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಧಾನ ಮಾಡುತ್ತಿರುವ ವೀಡಿಯೋ ತುಣುಕೊಂದನ್ನು ನಟ ರಾಮ್‌ಚರಣ್‌ ತಮ್ಮ ಇನ್ಸ್ಟಾ ಗ್ರಾಂ ಪೇಜ್‌ನಲ್ಲಿ ಪೋಸ್ಟ್‌ ಮಾಡಿದ್ದು, Iam really proud of you dad ಎಂದು ಬರೆದುಕೊಂಡು ಸಂತಸ ಹಂಚಿಕೊಂಡಿದ್ದಾರೆ.

ತೆಲುಗು ಚಿತ್ರರಂಗ ಸೇರಿದಂತೆ ದೇಶಾದ್ಯಂತ ಚಿರಂಜೀವಿ ಅಭಿಮಾನಿಗಳು ತಮ್ಮ ನಾಯಕನಿಗೆ ಒಲಿದ ಪ್ರಶಸ್ತಿಗೆ ಸಂಭ್ರಮಿಸಿದ್ದಾರೆ.

Tags:
error: Content is protected !!