ಕೊಡಗು: ನಿನ್ನೆ (ಮೇ.9) ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಯು.ಎಸ್ ಮೀನಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್ ಓಂಕಾರಪ್ಪ ನೇಣಿಗೆ ಶರಣಾಗಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದ್ದು, ಆತ್ಮಹತ್ಯೆ ಇನ್ನೂ ಖಚಿತವಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟನೆ ನೀಡಿದ್ದಾರೆ.
ವಿದ್ಯಾರ್ಥಿನಿ ಕೊಲೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಪರಿಶೀಲನೆ ವೇಳೆ ಹಮ್ಮಿಯಾಲ ಗ್ರಾಮದ ತೋಟದ ಸಮೀಪದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆರೋಪಿ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿ ಮೀನಾಳ ರುಂಡಕ್ಕಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಕುರಿತು ಸದ್ಯ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.