Mysore
25
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಮಾಜಿ ಸಿಎಂ ಎಸ್‌.ಎಂ ಕೃಷ್ಣ ಆರೋಗ್ಯ ಸ್ಥಿರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಬೆಂಗಳೂರು: ವಯೋ ಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರಿಗೆ ಐಸಿಯು ನಲ್ಲೇ ಚಿಕಿತ್ಸೆ ಮುಂದುವರೆದಿದೆ.

ಉಸಿರಾಟದ ಸೋಂಕಿಗೆ ಒಳಗಾಗಿದ್ದ ಅವರನ್ನು ಏಪ್ರಿಲ್‌ 22ರಂದು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಮೊದಲು ದಾಖಲಿಸಲಾಗಿತ್ತು. ಬಳಿಕ ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ಏಪ್ರಿಲ್‌ 29ರಂದು ದಾಖಲಿಸಿ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಇವರಿಗೆ ಡಾ. ಸತ್ಯನಾರಾಯಣ ಹಾಗೂ ಡಾ. ಸುನೀಲ್‌ ಕಾರಂತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Tags:
error: Content is protected !!