Mysore
22
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜೈಲ್‌ನಿಂದ ಬಿಡುಗಡೆ ಬಳಿಕ ಚಾಮುಂಡೇಶ್ವರಿ ದರ್ಶನ ಪಡೆದ ರೇವಣ್ಣ

ಮೈಸೂರು : ಮಹಿಳೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದ್ದು, ಬಿಡುಗಡೆಯಾಗುತ್ತಿದ್ದಂತೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.

ಹಾಸನ ಮಹಿಳೆ ಕಿಡ್ನ್ಯಾಪ್‌ ಕೇಸ್‌ಗೆ ಸಂಬಂಧಿಸಿದಂತೆ ಹಚ್‌.ಡಿ.ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಬಿಡುಗಡೆಗೊಂಡ ರೇವಣ್ಣ ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಂದು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲಾ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಲೆ. ನಾನು ದೇವರ ಮೇಲೆ ನಂಬಿಕೆ ಇಟ್ಟಿರುವವನು. ತಾಯಿ ಚಾಮುಂಡೇಶ್ವರಿ ನನಗೆ ನ್ಯಾಯಾ ಕೊಡಿಸುತ್ತಾಳೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.

ಈ ವೇಳೆ ಪುತ್ರ ಪ್ರಜ್ವಲ್‌ ರೇವಣ್ಣ ಅವರ ಹೆಸರಲ್ಲೂ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

Tags:
error: Content is protected !!