Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಮತ್ತು ದ್ವಿತೀಯ ರ್ಯಾಂಕ್‌ ಪಡೆದ ಪ್ರತಿಭಾನ್ವಿತರನ್ನು ಸನ್ಮಾನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇಬ್ಬರ ಶಿಕ್ಷಣಕ್ಕೆ ವೈಯಕ್ತಿಕ ನೆರವು ಘೋಷಿಸಿದ ಸಿಎಂ

  • ಇಬ್ಬರೂ ಓದಿದ ಮೊರಾರ್ಜಿ ದೇಸಾಯಿ ಶಾಲೆಗಳ ಅಭಿವೃದ್ಧಿಗೆ ಒಂದೂವರೆ ಕೋಟಿ ರೂ. ಅನುದಾನದ ಘೋಷಣೆ

ಬೆಂಗಳೂರು : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಹಾಗೂ ದ್ವಿತೀಯ Rank ಪಡೆದ ಮಂಡ್ಯ ತಾಲೂಕಿನ
ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸನ್ಮಾನಿಸಿದರು. ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.‌

ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ವುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು.
ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು.

ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ತಿಳಿಸಿದರು.

ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯತೆ ಅರ್ಪಿಸಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994 ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಅವರು ಹೇಳಿದರು.

Tags: