Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ರಾಜ್ಯದ ಗಮನ ಬೇರೆಡೆ ಸೆಳೆಯಲು ನಮ್ಮ ಮೇಲೆ ಆರೋಪ ಮಾಡಲಾಗುತ್ತಿದೆ: ಚೆಲುವರಾಯಸ್ವಾಮಿ

ಮಂಡ್ಯ: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡರು ಕೈ ನಾಯಕರ ಮೇಲೆ ಗಂಭೀರ ಅರೋಪ ಮಾಡಿರುವ ಬೆನ್ನಲ್ಲೇ ಜೆಡಿಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಕಾಂಗ್ರೆಸ್‌ ನಾಯಕರ ಹೆಸರನ್ನು ಬಹಿರಂಗಗೊಳಿಸಿ, ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೆ ಕೆಟ್ಟ ಹೆಸರು ತರಲು ಈ ಕಾರ್ಯ ನಡೆದಿದೆ ಎಂದು ಆರೋಪಿಸಿತ್ತು.

ಆರೋಪದಲ್ಲಿ ಮಂಡ್ಯ ಜಿಲ್ಲ ಉಸ್ತುವಾರಿ ಸಚಿವ ಎನ್‌. ಚೆಲುವರಾಯಸ್ವಾಮಿ ಹೆಸರು ಕೂಡಾ ಕೇಳಿ ಬಂದಿತ್ತು. ಈ ಆರೋಪದ ಬೆನ್ನಲ್ಲೇ ಕೃಷಿ ಸಚಿವ ಎನ್‌. ಚೆಲುವರಾಯಸ್ವಾಮಿ ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲದಿರುವುದರ ಬಗ್ಗೆ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ ಎಂದು ಹೇಳಿದ್ದಾರೆ.

ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಹಾಗೂ ಬೇರೆಯವರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲು ನನ್ನ ಹಾಗೂ ನನ್ನ ಸಹೋದ್ಯೋಗಿ ಮಿತ್ರರಾದ ಡಿಸಿಎಂ ಡಿಕೆ ಶಿವಕುಮಾರ್‌, ಕೃಷ್ಣಭೈರೇಗೌಡ ಹಾಗು ಪ್ರಿಯಾಂಕ್‌ ಖರ್ಗೆ ಅವರುಗಳ ಮೇಲು ಸಹ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ.

ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ ಈಗಾಗಲೇ ನಾನು ದೇವರಾಜೇಗೌಡ ಅವರ ವಿರುದ್ಧ ಮಾನ ನಷ್ಟ ಮೊಕ್ಕದ್ದಮೆ ದಾಖಲಿಸಲು ನಿರ್ಧರಿಸಿರುವೆ. ಪ್ರಕರಣದ ಬಗ್ಗೆ ಎಸ್.ಐ.ಟಿ ತನಿಖೆ ನಡೆಸುತ್ತಿದ್ದು ಸತ್ಯಾಂಶ ಆದಷ್ಟು ಬೇಗ ಹೊರ ಬರಲಿದೆ ಎಂದು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Tags: