ಮೈಸೂರು: ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ಜರುಗಿದೆ.
ಪ್ರಕಾಶ್(51) ಮತ್ತು ಪತ್ನಿ ಯಶೋಧ (48) ಮೃತಪಟ್ಟವರು. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪಿರಿಯಾಪಟ್ಟಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಮೇಲೆ ಯಾವ ಗಾಯದ ಗುರುತು ಇಲ್ಲ.
ಪತಿ ಹಾಗೂ ಪತ್ನಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪತಿ ಪ್ರಕಾಶ್ ರಸ್ತೆ ಬದಿ ಕ್ಯಾಂಟೀನ್ ನಡೆಸುತಿದ್ದರೆ, ಪತ್ನಿ ಯಶೋಧ ಫ್ಲೋರ್ ಮಿಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.