Mysore
21
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಪರಿಷತ್‌ ಚುನಾವಣೆ: ಚುನಾವಣಾ ವೀಕ್ಷಕರ ನೇಮಕ

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಐ. ಎ. ಎಸ್ ಅಧಿಕಾರಿ ಡಾ. ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕಕರನ್ನಾಗಿ ನೇಮಕ ಮಾಡಿದೆ.

ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು/ ಸಂಪರ್ಕಿಸಲು ಸಹಾಯಕ ಅಧಿಕಾರಿಯಾಗಿ ಮೈಸೂರಿನ ಅಬಕಾರಿ ಉಪ ಆಯುಕ್ತರಾದ ಎಸ್ ನಾಗರಾಜಪ್ಪ ಅವರನ್ನು ನೇಮಕ ಮಾಡಲಾಗಿದೆ. ವೀಕ್ಷಕರನ್ನು ಮೊ. ಸಂ. 9449597178, 7204214565 ಗೆ ಕರೆ ಮಾಡಿ ಸಂಪರ್ಕಿಸಬಹುದೆಂದು ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣಾ ಅಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!