ಮೈಸೂರು: ಕಲುಷಿತ ನೀರು ಸೇವನೆಯಿಂದಾಗಿ ಅಸ್ವಸ್ಥಗೊಂಡಿದ್ದ ಯುವಕ ಸಾವನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಡಿ. ಸಾಲುಂಡಿ ಗ್ರಾಮದ ಕನಕರಾಜು (20) ಮೃತ ದುರ್ದೈವಿ.
ನಿನ್ನೆ ( ಮೇ 20 ) ಡಿ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಕಾರಣ ಹಲವರಿಗೆ ವಾಂತಿ ಭೇದಿ ಶುರುವಾಗಿದೆ. ಹೀಗೆ ಆಸ್ಪತ್ರೆಗೆ ದಾಖಲಾಗಿದ್ದ ಕನಕರಾಜು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಇಬ್ಬರು ಮಕ್ಕಳು ಹಾಗೂ ಮೂವರು ಮಹಿಳೆಯರು ಸೇರಿದಂತೆ ಒಟ್ಟು 15 ಗ್ರಾಮಸ್ಥರು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಗ್ರಾಮದಲ್ಲಿ ಹಲವರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಇನ್ನು ಗ್ರಾಮಕ್ಕೆ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.