Mysore
30
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ, ಅನಾಹುತ ಆಗ್ಲಿ ಅಂತನಾ: ಸಿಎಂ ಪ್ರಶ್ನೆ

ಬೆಂಗಳೂರು: ಬುಧವಾರ(ಮೇ.22) ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್ ನಡೆಸುವ ವೇಳೆ  ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಬನಶಂಕರಿಯ ಎರಡನೇ ಹಂತ ನೂರಡಿ ರಸ್ತೆಯ ಒಣಗಿದ ಮರಗಳನ್ಮು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು, ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು, ಪದ್ಮನಾಭನಗರ ಫ್ಲೈಓವರ್ ಬಳಿ ಹಾನಿಯಾಗಿರುವ ಫುಟ್ ಪಾತ್ ಶೀರ್ಘವಾಗಿ ದುರಸ್ತಿಗೊಳಿಸಲು ಹಾಗೂ ಮೆಟ್ರೋ ಮತ್ತು ಫ್ಲೈ ಓವರ್ ಕಾಮಗಾರಿಯಿಂದಾಗಿ ಅಲ್ಲಲ್ಲಿ ಹಾಕಲಾಗಿದ್ದ ಡೆಬ್ರಿಸ್ ಗಳನ್ನು ಆಗಿಂದಾಗಲೇ ತೆರವುಗೊಳಿಸಲು ಸಿಎಂ ಸೂಚನೆ ನೀಡಿದರು.

Tags:
error: Content is protected !!