Mysore
26
overcast clouds

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣ: ಕೊಲೆಯ ಕಾರಣ ಬಿಚ್ಚಿಟ್ಟ ಆರೋಪಿ ವಿಶ್ವ

ಬೆಂಗಳೂರು: ಹುಬ್ಬಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ನನ್ನು ಸಿಐಡಿ ಪೊಲೀಸರು ಬುಧವಾರ(ಮೇ.೨೨) ವಶಕ್ಕೆ ಪಡೆದಿದ್ದಾರೆ. ಈ ವೇಳೆ ತೀವ್ರ ವಿಚಾರಣೆಗೆ ಒಳಪಡಿಸಿದ ಸಿಐಡಿ ಅಧಿಕಾರಿಗಳ ಮುಂದೆ ಹಂತಕ ವಿಶ್ವ ಕೊಲೆಯ ಕಾರಣ ಬಾಯ್ಬಿಟ್ಟಿದ್ದಾನೆ.

ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಹಂತಕ ವಿಶ್ವ ಮುಂಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ, ರೈಲಿನಲ್ಲಿಯೂ ಕೂಡ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ತಪ್ಪಿಸಿಕೊಳ್ಳವಾಗ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯ ತನಿಖೆಯ ಹೊಣೆ ಹೊತ್ತ ಸಿಐಡಿ ಅಧಿಕಾರಿಗಳು ಆಸ್ಪತ್ರೆಗೆ ಆಗಮಿಸಿ ತಮ್ಮ ವಶಕ್ಕೆ ಪಡೆದು, ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿತು.‌

ತನಿಖಾಧಿಕಾರಿಗಳ ಬಳಿ ಮಾತನಾಡಿದ ವಿಶ್ವ, ಅಂಜಲಿಯನ್ನು ನಾನು ಮೈಸೂರಿಗೆ ಬಾ ಎಂದು ಕರೆದೆ. ಆಕೆ ಬರಲಿಲ್ಲ. ಹಾಗಾಗಿ ಕೊಲೆ ಮಾಡಿದೆ ಎಂದು ಹೇಳಿದ್ದಾನೆ.

ಅಂಜಲಿ ಕೊಲೆಯಾಗುವ ಹಿಂದಿನ ದಿನ ಅಂಜಲಿ ಆರೋಪಿ ವಿಶ್ವನನ್ನು 2000 ರೂ. ಹಣ ಕೇಳಿದ್ದಳು. ಆದರೆ ಆತ 1000 ರೂ. ಹಣವನ್ನು ಫೋನ್‌ ಪೇ ಮಾಡಿದ್ದ. 1000 ರೂಪಾಯಿ ಹಣ ತೆಗೆದುಕೊಂಡು ನಂತರ ಆಕೆ ಆತನನ್ನು ಬ್ಲಾಕ್ ಮಾಡಿದ್ದಳು. ಅದೇ ಕಾರಣಕ್ಕೆ ಸಿಟ್ಟು ಬಂದು ಕೊಲೆ ಮಾಡಿದ್ದೇನೆ ಎಂದು ವಿಶ್ವ ಸಿಐಡಿ ಅಧಿಕಾರಿಗಳ ಬಳಿ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಮೇ 15ರಂದು ಮುಂಜಾನೆ ಅಂಜಲಿ ಹತ್ಯೆ ಮಾಡಲಾಗಿತ್ತು. ಇದಕ್ಕೂ ಮುನ್ನ ಆರೋಪಿಯು ಅಂಜಲಿಗೆ ನೇಹಾ ಕೊಲೆಯಾದಂತೆಯೇ ನಿನ್ನ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಆರೋಪಿ ವಿಶ್ವ ಅಂಜಲಿಗೆ ಬೆದರಿಸಿದ್ದ ವಿಚಾರವಾಗಿ ಆಕೆಯ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಹೆಚ್ಚು ಗಮನ ನೀಡದ ಪೊಲೀಸರು, ಇದೆಲ್ಲ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರು ಎನ್ನಲಾಗಿತ್ತು.

Tags:
error: Content is protected !!