Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ನನ್ನ ತಾಳ್ಮೆ ಪರೀಕ್ಷಿಸಬೇಡ: ಪ್ರಜ್ವಲ್‌ ರೇವಣ್ಣಗೆ ಎಚ್ಚರಿಕೆ ನೀಡಿದ ಎಚ್‌ಡಿ ದೇವೇಗೌಡರು!

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿದೇಶದಲ್ಲಿ ಪ್ರಜ್ವಲ್‌ ತಲೆ ಮರೆಸಿಕೊಂಡಿರುವ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಹಲವಾರು ಕಾನೂನಾತ್ಮಕ ಕ್ರಮಗಳನ್ನು ಕೈಗೊಂಡಿದೆ.

ಸಿಎಂ ಸಿದ್ದರಾಮಯ್ಯ ಅವರು ಕೂಡಾ ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಎರಡು ಬಾರಿ ಪತ್ರವನ್ನು ಬರೆದಿದ್ದಾರೆ. ಇತ್ತ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್‌ ವಾಪಸಾತಿಗೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಕೂಡಾ ಮನವಿ ಮಾಡಿದ್ದರು.

ಇದರ ಬೆನ್ನಲ್ಲೇ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರು ಪ್ರಜ್ವಲ್‌ ಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಬಹಿರಂಗ ಪತ್ರವನ್ನು ಹಂಚಿಕೊಂಡಿರುವ ದೇವೇಗೌಡರು. ನಿನ್ನಿಂದ ಕುಟುಂಬ ಮಾನ ಹಾಳಾಗುತ್ತಿದೆ. ನೀನು ಎಲ್ಲೇ ಇದ್ದರೂ ಹಿಂತಿರುಗಿ ಬಂದು ಕಾನೂನು ಪ್ರಕ್ರಿಯೆ ಒಳಪಡು ಎಂದು ಎಚ್ಚರಿಕೆ ನೀಡುತ್ತಿದ್ದೇನೆ. ಇನ್ನು ನನ್ನ ತಾಳ್ಮೆಯನ್ನು ಪರೀಕ್ಷಿಸಬಾರದು ಎಂದು ಬರೆದುಕೊಂಡಿದ್ದಾರೆ.

ಇದೊಂದು ರಾಜಕೀಯ ಪಿತೂರಿಯಾಗಿದ್ದು, ಇದನ್ನು ಸಮರ್ಥವಾಗಿ ಎದುರಿಸಬೇಕಿದೆ. ಇದಕ್ಕಾಗಿ ಯಾವುದೇ ಮುಲಾಜಿಲ್ಲದೇ ಪ್ರಜ್ವಲ್‌ ಬಂದು ಪೊಲೀಸರಿಗೆ ಶರಣಾಗಿ, ವಿಚಾರಣೆ ಎದುರಿಸಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ, ನನ್ನ, ಕುಟುಂಬದ ಕೋಪವನ್ನು ಎದುರಿಸಬೇಕಾಗುತ್ತದೆ. ಅವನು ಎಸಗಿದ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ನ್ಯಾಯಾಲಯವಿದೆ.

ನಾನಾಗಲಿ, ನಮ್ಮ ಕುಟುಂಬವಾಗಲಿ ಈ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಈ ಪ್ರಕಣದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಿ, ಮರಳಿ ಜನರ ವಿಶ್ವಾಸವನ್ನು ಹಿಂಪಡೆಯುವುದೇ ನನ್ನ ಉದ್ದೇಶವಾಗಿದೆ ಎಂದು ನೋಟಿಸ್‌ ನೀಡಿದ್ದಾರೆ.

Tags: