ಹಾವೇರಿ: ತಿರುಪತಿಗೆ ತೆರಳುತ್ತಿದ್ದ ಕಾರು ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತಕ್ಕೆ ತುತ್ತಾಗಿ ನಾಲ್ವರು ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ.
ಸುರೇಶ್(45), ಐಶ್ವರ್ಯ(22), ಚೇತನಾ(7), ಸ್ಥಳದಲ್ಲೇ ಮೃತಪಟ್ಟಿದ್ದು, ಪ್ರಮೀಳಾ(28) ರಾಣೆಬೆನ್ನೂರು ಸರ್ಕಾರಿ ಆಸ್ಪತೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಸ ಚಾರ್ಕಿ, ಪ್ರಭುರಾಜ್ ಸಮಗಂಡಿ, ಗೀತಾ ಭಾರ್ಕಿ, ಹೊನ್ನಪ್ಪ ಬಾರ್ಕಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ರಾಣೆಬೆನ್ನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಾಲ್ವರನ್ನು ದಾವಣೆಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದರು. ಮಧ್ಯರಾತ್ರಿ 12:30 ಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದಿದೆ. ಘಟನಾ ಸ್ಥಳಕ್ಕೆ ಹಾವೇರಿ ಎಸ್ಪಿ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು.