ಮೈಸೂರು/ಎಚ್.ಡಿ ಕೋಟೆ: ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಹುಲಿಯೊಂದು ಹಠಾತ್ ಹೊತ್ತೊಯ್ದ ಘಟನೆ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಶನಿವಾರ (ಮೇ.25) ಸಂಜೆ ವೇಳೆ ನಡೆದಿದೆ.
ಎನ್. ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ ಚಿಕ್ಕಿ (48) ಹುಲಿಯಿಂದ ಮೃತರಾದರವಾಗಿದ್ದಾರೆ. ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ಹುಲಿ ಕೊಂಡೊಯ್ಯುತ್ತಿದ್ದ ದೃಶ್ಯವನ್ನು ಕಂಡ ಕುರಿಗಾಹಿ ಗ್ರಾಮಕ್ಕೆ ತೆರಳಿ ವಿಷಯ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎನ್. ಬೇಗೂರು ಅರಣ್ಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವದ ಹುಡುಕಾಟ ನಡೆಸಿದ್ದಾರೆ. ಆದರೆ ಇಂದು (ಭಾನುವಾರ, ಮೇ.26) ಬೆಳಿಗ್ಗೆ ಅರಣ್ಯ ವೀಕ್ಷಣೆಯ ಟವರ್ ಮೇಲೆ ಮಹಿಳೆಯ ಮೃತದೇಹ ಕಾಣಿಸಿಕೊಂಡಿದೆ.
ಈ ಸಂಬಂಧ ಅಂತರಸಂತ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.