ನವದೆಹಲಿ: ಲೋಕಸಭಾ ಚುನಾವಣೆಯ 7ನೇ ಹಂತದ ಮತದಾನ ಇಂದು ಮುಕ್ತಾಯಗೊಳ್ಳಲಿದ್ದು, ಇದಾದ ಬಳಿಕ ಯಾವುದೇ ಸುದ್ದಿ ವಾಹಿನಿಗಳಲ್ಲಿ ನಡೆಯಲಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಟಿಆರ್‌ಪಿಗಾಗಿ ಹಾಗೂ ಕೆಸರೆರಚಾಟದ ಚರ್ಚೆಗಳಲ್ಲಿ ಪಾಲ್ಗೊಳ್ಳಲು ನಮಗೆ ಯಾವುದೇ ಕಾರಣಗಳು ಇಲ್ಲ ಎಂದು ಕಾಂಗ್ರೆಸ್ ಹೇಳಿದೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ಈಗಾಗಲೇ ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಿದ್ದು, ಅವರ ತೀರ್ಪು ಮತಪೆಟ್ಟಿಗೆಯಲ್ಲಿ ಸುರಕ್ಷಿತವಾಗಿದೆ. ಈ ಸಂಬಂಧ ಜೂನ್.4 ರಂದು ಫಲಿತಾಂಶ ಹೊರ ಬೀಳಲಿದ್ದು, ಅದಕ್ಕು ಮುನ್ನಾ ಟಿಆರ್‌ಪಿಗಾಗಿ ಮಾಧ್ಯಮಗಳು ನಡೆಸುವ ಚುನಾವಣೋತ್ತರ ಸಮೀಕ್ಷೆಯಲ್ಲಿ ನಾವು ಭಾಗವಹಿಸುವುದಿಲ್ಲ. ಇದಕ್ಕಾಗಿ ನಮಗೆ ಯಾವುದೇ ಕಾರಣಗಳು ಇಲ್ಲ ಎಂದು ಬರೆದುಕೊಂಡಿದ್ದಾರೆ.
ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಯಾವುದೇ ಚರ್ಚೆಯಾದರು ಅದು ಜನರಿಗೆ ಚರ್ಚೆಯ ವಿಷಯನ್ನೇ ತಿಳಿಸುವುದು ಆಗಿರಬೇಕು. ಜೂನ್.4ರ ಬಳಿಕ ನಾವು ಸಂತೋಷದಿಂದ ಚರ್ಚೆಗಳಲ್ಲಿ ಭಾಹವಹಿಸಲಿದ್ದೇವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.