Mysore
22
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಮೋದಿಗೆ ಶುಭ ಕೋರಿದ ಜೋ ಬೈಡನ್

ನವದೆಹಲಿ: ಸತತ  ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಶುಭಾಶಯ ತಿಳಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಪೊಸ್ಟ್‌ ಮಾಡಿರುವ ಅವರು,   ಭಾರತ ಮತ್ತು ಅಮೆರಿಕದ ಬಾಂಧವ್ಯ ಮುಂದುವರಿಸುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ತನ್ನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ಬಯಸುವುದಾಗಿ ಹೇಳಿದ್ದಾರೆ.

ಪ್ರಜಾಪ್ರಭುತ್ವದ  ಚುನಾವಣೆ ವ್ಯವಸ್ಥೆಯಲ್ಲಿ ಮತದಾರರು ಮತ್ತೊಮ್ಮೆ ಮೋದಿ ಗೆಲುವು ಸಾಧಿಸಲು ಒಲವು ತೋರಿದ್ದಾರೆ. ಮೂರನೇ ಬಾರಿಗೆ ಪ್ರಧಾನಿಯಾಗಿ ಮುಂದುವರಿಯುತ್ತಿರುವುದು ಸಂತಸ ತಂದಿದೆ. ಭಾರತ ಮತ್ತು ಅಮೆರಿಕ ಸ್ನೇಹವು ಮತ್ತಷ್ಟು ಬಲಿಷ್ಠಗೊಳ್ಳಲಿದೆ. ಇದು ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲು ಸಹಾಯಕವಾಗಲಿದೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಫ್ರಾನ್ಸ್ ಪ್ರವಾಸದಲ್ಲಿರುವ ಬೈಡನ್‌ ದೂರವಾಣಿ ಕರೆ ಮೂಲಕ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.

Tags:
error: Content is protected !!