ನವದೆಹಲಿ: ಹೊಸದಾಗಿ ಸಂಸತ್‌ಗೆ ಆಯ್ಕೆಯಾಗಿರುವ ಬಾಲಿವುಡ್ ನಟಿ, ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಅನ್ನು ಶುಕ್ರವಾರ(ಜೂ.೭) ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ವಿರುದ್ಧ ದೂರು ದಾಖಲಾಗಿದ್ದು, ಗುರುವಾರ ರಣಾವತ್ ಗೆ ಕಪಾಳಮೋಕ್ಷ ಮಾಡಿದ ನಂತರ ಆಕೆಯನ್ನು ಅಮಾನತು ಗೊಳಿಸಿ ಆದೇಶ ಹೊರಡಿಸಲಾಗಿತ್ತು. ಕಪಾಳಮೋಕ್ಷ ಘಟನೆ ನಡೆದಾಗ ಕಂಗನಾ ದೆಹಲಿಗೆ ವಿಮಾನ ಹತ್ತಲು ಹೋಗುತಿದ್ದರು.
ಘಟನೆ ಬಳಿಕ ಕಾನ್‌ಸ್ಟೆಬಲ್ ಕುಲ್ವಿಂದರ್ ಅವರು, ನಟಿ ಕಂಗನಾ ರಣಾವತ್ ಅವರು ಪ್ರತಿಭಟನಾ ನಿರತ ರೈತರಿಗೆ ಅಗೌರವ ತೋರಿದ ಆರೋಪದ ಮೇಲೆ ಕಪಾಳಮೊಕ್ಷ ಮಾಡಿದೆ ಎಂದು ಹೇಳಿಕೆ ನೀಡಿದ್ದರು.